ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳನ್ನು ರಾಜ್ಯದಾದ್ಯಂತ ಜಾರಿಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು. ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಯುವನಿಧಿ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಆದರೆ ಕೆಲವು ಗ್ಯಾರಂಟಿಗಳಿಗೆ ಷರತ್ತುಗಳು ಅನ್ವಯವಾಗುತ್ತವೆ ಎಂದು ಅವರು ತಿಳಿಸಿದರು.
ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 5 ಗ್ಯಾರಂಟಿಗಳ ಅನುಷ್ಠಾನದ ಬಗ್ಗೆ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ.