ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ವತಿಯಿಂದ "ವಿಶ್ವಪರಿಸರ ದಿನಾಚರಣೆ" ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ದಿನೇಶ್ ಗುಂಡೂರಾವ್ ಅವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪರಿಸರವಾದಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.