ಬೆಂಗಳೂರಿನ ಅರಮನೆ ಮೈದಾನದಲ್ಲಿ ಚಿತ್ರನಟ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇವರ ವಿವಾಹ ಸಮಾರಂಭದಲ್ಲಿ ಕನ್ನಡ ಚಿತ್ರರಂಗದ ಅನೇಕ ನಾಯಕ ನಟರು, ನಿರ್ಮಾಪಕರು, ನಿರ್ದೇಶಕರು ಹಾಗೂ ಅಭಿಷೇಕ್ ಅಂಬರೀಶ್ ಅವರ ಆಪ್ತ ಸ್ನೇಹಿತರು ಸಂಬಂಧಿಗಳು ಉಪಸ್ಥಿತರಿದ್ದರು