ಬೆಂಗಳೂರು: ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಉಳಿದಿರುವ 58,000 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ವಿಧಾನಸೌಧದಲ್ಲಿ  ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಶಿಕ್ಷಕರು ಇಲಾಖೆಯ ಶಕ್ತಿ ಇದ್ದ ಹಾಗೆ. ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳವುದು ತಾತ್ಕಾಲಿಕ ಪರಿಹಾರ ಮಾತ್ರ. ಹೀಗಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು. ನೇಮಕಾತಿ ಪ್ರಕ್ರಿಯೆಯನ್ನು ವಿವಿಧ ಹಂತಗಳಲ್ಲಿ ಮುಗಿಸಲಾಗುವುದು ಎಂದು ತಿಳಿಸಿದ್ದಾರೆ.