ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು "ಶಕ್ತಿ ಯೋಜನೆ"ಗೆ ವಿಧಾನಸೌಧದಲ್ಲಿ ಇಂದು ಚಾಲನೆ ನೀಡಿದರು.  

ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ಮಧು ಬಂಗಾರಪ್ಪ‌ ಸೇರಿದಂತೆ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

ಕರ್ನಾಟಕ ರಾಜ್ಯದ ಮಹಿಳೆಯರು ರಾಜ್ಯದಾದ್ಯಂತ ಈ ಯೋಜನೆಯಿಂದ ಕೆ.ಎಸ್.ಆರ್.ಟಿ.ಸಿ ಹಾಗೂ ಬಿ.ಎಂ.ಟಿ.ಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.