ಅಕ್ರಮ ಆಸ್ತಿ ಗಳಿಕೆ ಸಂಬಂಧ ತಮಿಳುನಾಡಿನಲ್ಲಿ ' ಜಾರಿ ನಿರ್ದೇಶನಾಲಯ' (ಇಡಿ) ಅಧಿಕಾರಿಗಳು ಡಿಎಂಕೆ ಸಚಿವ ವಿ. ಸೆಂಥಿಲ್ ಬಾಲಾಜಿ ಅವರನ್ನು ಬಂಧಿಸಿದ್ದಾರೆ. ನಿನ್ನೆ ತಡರಾತ್ರಿ ಚೆನ್ನೈ ನಗರದ ಸೆಂಥಿಲ್ ಬಾಲಾಜಿ ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು. ದಾಖಲೆಗಳ ಪರಿಶೀಲನೆ ನಂತರ ಸೆಂಥಿಲ್ ಬಾಲಾಜಿ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಇಡಿ ಅಧಿಕಾರಿಗಳು ಸೆಂಥಿಲ್ ಬಾಲಾಜಿ ರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾಗ ಸಚಿವ ಸೆಂಥಿಲ್ ಗಳಗಳನೇ ಕಣ್ಣೀರಿಟ್ಟಿದ್ದಾರೆ.