ಕಲುಷಿತ ನೀರಿನ ಬಳಕೆಯ ಅವಾಂತರಗಳು ರಾಜ್ಯದಲ್ಲಿ ಮತ್ತೆ ಮರುಕಳಿಸಬಾರದು ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕಲುಷಿತ ನೀರು ಬಳಕೆಯಿಂದ ಅನಾಹುತಗಳಾದರೆ, ಅಧಿಕಾರಿಗಳನ್ನು ಹೊಣೆ ಮಾಡಿ ಅಮಾನತು ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದ್ದಾರೆ.
ಇತ್ತೀಚೆಗೆ ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರು ಕುಡಿದು ಮಕ್ಕಳು ಅಸ್ವಸ್ಥರಾಗಿದ್ದರು.
 
  
  
  
 