ಬೆಂಗಳೂರು: ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಚುನಾವಣೆಗೂ ಮುನ್ನ ಕಾಂಗ್ರೆಸ್ ಬಿಡುಗಡೆ ಮಾಡಿದ ಜಾಹೀರಾತಿನ ವಿರುದ್ಧ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್.ಕೇಶವಪ್ರಸಾದ್ ಅವರು ಮೇ 9ರಂದು ಪ್ರಕರಣ ದಾಖಲಿಸಿದ್ದರು.
ಅವರು ದಾಖಲಿಸಿದ್ದಂತ ಪ್ರಕರಣದಲ್ಲಿ ಬಿಜೆಪಿಯ ವರ್ಚಸ್ಸಿಗೆ ಕಳಂಕ ತರಲು ಕಾಂಗ್ರೆಸ್ ನಾಯಕರು ಜಾಹೀರಾತು ನೀಡಿದ್ದಾರೆ. ಜಾಹೀರಾತಿನಲ್ಲಿ ಬಿಜೆಪಿಯ ಬಗ್ಗೆ ಸುಳ್ಳು ಆರೋಪ ಮಾಡಲಾಗಿದೆ ಎಂಬುದಾಗಿ ಹೇಳಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದಂತ ಹೆಚ್ಚುವರಿ ಮುಖ್ಯ ಮೆಟ್ರೋ ಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಗೆ ಸಮನ್ಸ್ ಜಾರಿಗೊಳಿಸಿದೆ.