ಮಂಡ್ಯದಲ್ಲಿ ನಡೆಯಲಿರುವ ೮೭ ನೇ "ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ"ಕ್ಕೆ ಮುಂದಿನ ಬಜೆಟ್ ನಲ್ಲಿ ಅನುದಾನ ಘೋಷಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಬೇಕೆಂಬ ತೀರ್ಮಾನವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಸಭೆಯಲ್ಲಿ ಕೈಗೊಳ್ಳಲಾಯಿತು.
ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು. ಸಭೆಯಲ್ಲಿ ಕಸಾಪ ಅಧ್ಯಕ್ಷರಾದ ಮಹೇಶ್ ಜೋಶಿ, ಸಚಿವ ಚಲುವರಾಯಸ್ವಾಮಿ ಅವರು ಉಪಸ್ಥಿತರಿದ್ದರು.