4 ದಿನಗಳ ಅಮೆರಿಕ ಪ್ರವಾಸಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 21 ರಂದು ವಿಶ್ವಸಂಸ್ಥೆಯಲ್ಲಿ ನಡೆಯಲಿರುವ "ಅಂತಾರಾಷ್ಟ್ರೀಯ ಯೋಗ ದಿನಾಚರಣೆ" ಯಲ್ಲಿ ಪಾಲ್ಗೊಳ್ಳಲಿದ್ದಾರೆ.
100ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ವಿಶ್ವಸಂಸ್ಥೆಯ ನ್ಯೂಯಾರ್ಕ್ ನಗರದ ಕೇಂದ್ರ ಕಚೇರಿಯಲ್ಲಿ ಯೋಗ ಕಾರ್ಯಕ್ರಮ ನಡೆಯಲಿದೆ.