ರಾಜ್ಯ ಸರ್ಕಾರ ವಿದ್ಯುತ್ ದರ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ನೂರಾರು ಕೈಗಾರಿಕೋದ್ಯಮಿಗಳು ಹಾಗೂ ಸಾವಿರಾರು ವರ್ತಕರು ಭಾಗಿಯಾಗಿದ್ದರು. ಬೆಳಗಾವಿ ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.
ರಾಜ್ಯ ಸರ್ಕಾರ ತಕ್ಷಣವೇ ವಿದ್ಯುತ್ ದರವನ್ನು ಕಡಿಮೆ ಮಾಡಬೇಕೆಂದು ಒತ್ತಾಯಿಸಿದರು.