ಬೆಂಗಳೂರಲ್ಲಿ "ಕರ್ನಾಟಕ ರಾಜ್ಯ ರೈತ ಸಂಘ"ದ ಮಂಡ್ಯ ಜಿಲ್ಲಾ ಘಟಕದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹಮ್ಮಿಕೊಂಡಿದ್ದರು.
ಹೇಮಾವತಿ ಎಡದಂಡೆ ಮುಖ್ಯ ನಾಲೆಯ ಸರಪಳಿ 72.260 ರಿಂದ 214.300 ಕಿ.ಮೀ ವರೆಗೆ ನಾಲೆಯ ಆಧುನೀಕರಣ ಕಾಮಗಾರಿಯಲ್ಲಿ ಕೋಟ್ಯಂತರ ರೂಪಾಯಿಗಳ ಅಕ್ರಮ ನಡೆದಿದೆ ಎಂದು ಮಂಡ್ಯ ಜಿಲ್ಲಾ ರೈತ ಸಂಘದ ಸದಸ್ಯರು ಆರೋಪಿಸಿದರು.
ರಾಜ್ಯ ಸರ್ಕಾರದ ಕೆಲ ಭ್ರಷ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಈ ವಂಚನೆಗೆ ಪ್ರಮುಖ ಕಾರಣ ಎಂದು ಆರೋಪಿಸಿದರು.
ರಾಜ್ಯ ಸರ್ಕಾರ ಈ ವಂಚನೆಯಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ನೀಡಬೇಕು ಹಾಗೂ ರಾಜ್ಯದ ರೈತರಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.