ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಇಂದು ತಹಶೀಲ್ದಾರ್ ಅಜಿತ್ ರೈ ನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

  ನಿನ್ನೆ ಅಜಿತ್ ರೈ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ₹41 ಲಕ್ಷ ನಗದು, ಅಪಾರ ಪ್ರಮಾಣದ ಚಿನ್ನಾಭರಣ, ಕೆ.ಜಿ ಗಟ್ಟಲೆ ಬೆಳ್ಳಿ ಆಭರಣಗಳು ಹಾಗೂ ಆಸ್ತಿ ಪತ್ರಗಳನ್ನು ವಶಕ್ಕೆ ಪಡೆದಿದ್ದರು. ಅಜಿತ್ ರೈ 1 ಸಾವಿರ ಕೋಟಿಗೂ ಹೆಚ್ಚಿನ ಮೌಲ್ಯದ ಜಮೀನು ಹೊಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.