ಹಿಂಸಾಚಾರ ಪೀಡಿತ ಮಣಿಪುರದ ಬಿಷ್ಣೋಪುರದಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಪೊಲೀಸರು ತಡೆದಿದ್ದಾರೆ. ಮಣಿಪುರ ಪೊಲೀಸರ ಈ ಕ್ರಮವನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ 'ನಿರಂಕುಶ ಪ್ರಭುತ್ವ' ನೀತಿ ಬಳಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.