ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹೊರಡಿಸಿದ್ದ ಹಲವು ನಿರ್ಬಂಧಗಳು ಮತ್ತು ಟೇಕ್ ಡೌನ್ ಆದೇಶಗಳನ್ನು ಪ್ರಶ್ನಿಸಿ 'ಟ್ವಿಟರ್ ಸಂಸ್ಥೆ' ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಜತೆಗೆ ಟ್ವಿಟರ್ ಸಂಸ್ಥೆಗೆ ₹50 ಲಕ್ಷ ದಂಡ ವಿಧಿಸಿದೆ. 

ಈ ಸಂಬಂಧ ರಿಟ್ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಆದೇಶ ಹೊರಡಿಸಿದೆ.