ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ "ಮೇಕ್ ಇನ್ ಇಂಡಿಯಾ" ಪರಿಕಲ್ಪನೆ ಬಗ್ಗೆ ರಷ್ಯಾ ದೇಶದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೇಕ್ ಇನ್ ಇಂಡಿಯಾ ಯೋಜನೆ ಭಾರತದ ಆರ್ಥಿಕ ವ್ಯವಸ್ಥೆ ಮೇಲೆ ಧನಾತ್ಮಕ ಪರಿಣಾಮ ಬೀರಿದ್ದು, ಅದರ ಪರಿಣಾಮ ನಿಧಾನವಾಗಿ ಗೋಚರಿಸುತ್ತಿದೆ ಎಂದು ಪುಟಿನ್ ಅವರು ಶ್ಲಾಘಿಸಿದರು.