ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಫೋನ್ ನಲ್ಲಿ ಮಾತನಾಡಿದ್ದಾರೆ. ಉಭಯ ರಾಷ್ಟ್ರಗಳ ನಾಯಕರು ಜಾಗತಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದಾರೆ. ರಷ್ಯಾ - ಉಕ್ರೇನ್ ನಡುವಿನ ಸಂಘರ್ಷ, ರಷ್ಯಾದಲ್ಲಿ ವ್ಯಾಗ್ನರ್ ಪಡೆಯ ದಂಗೆ ಸೇರಿದಂತೆ ಇನ್ನಿತರ ಪ್ರಮುಖ ಬೆಳವಣಿಗೆಗಳ ಬಗ್ಗೆ ಮಾತನಾಡಿದ್ದಾರೆ.