ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ 'ಅನ್ನಭಾಗ್ಯ' ಹಾಗೂ 'ಗೃಹಜ್ಯೋತಿ' ಯೋಜನೆಗಳು ಜಾರಿಯಾಗಿವೆ. ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಅನ್ನಭಾಗ್ಯ ಹಾಗೂ ಗೃಹಜ್ಯೋತಿ ಯೋಜನೆ ಜಾರಿಗೊಳಿಸಿದೆ. ಹೆಚ್ಚುವರಿ ಅಕ್ಕಿ ಲಭ್ಯವಿಲ್ಲದ ಕಾರಣ ಅನ್ನಭಾಗ್ಯ ಯೋಜನೆಯಡಿ 5 ಅಕ್ಕಿ ಹಾಗೂ 5 ಕೆ.ಜಿ ಅಕ್ಕಿ ಬದಲಿಗೆ ಹಣ ನೀಡುವುದಾಗಿ ಸರ್ಕಾರ ತಿಳಿಸಿದೆ.
'ಗೃಹಜ್ಯೋತಿ' ಯೋಜನೆಯಡಿ ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತವಾಗಿ ದೊರೆಯಲಿದೆ.