ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಧಿಕಾರಿಯಾದ ಐ.ಪಿ.ಎಸ್ ಅಲೋಕ್ ಕುಮಾರ್ ಅವರು ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ ವೇ ಹೆದ್ದಾರಿ ಪರಿಶೀಲನೆ ನಡೆಸಿದರು. ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ ವೇ ಹೆದ್ದಾರಿ ಈಗ ಸಾವಿನ ಹೆದ್ದಾರಿಯಂತೆ ಬದಲಾಗಿದ್ದು ಇದುವರೆಗೆ 590 ಕ್ಕೂ ಹೆಚ್ಚಿನ ಅಪಘಾತಗಳು ಸಂಭವಿಸಿವೆ. ಇತ್ತೀಚೆಗೆ ಹೆಚ್ಚು ಅಪಘಾತಗಳಾದ ಹಿನ್ನೆಲೆಯಲ್ಲಿ ಐ.ಪಿ.ಎಸ್ ಅಧಿಕಾರಿ ಅಲೋಕ್ ಕುಮಾರ್ ಅವರು ಹೆದ್ದಾರಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಪೊಲೀಸರಿಗೆ ಸೂಕ್ತ ಸಲಹೆ ಸೂಚನೆ ನೀಡಿದರು.