ಬೆಂಗಳೂರಿನ ಬಂಡೆಪಾಳ್ಯ ಠಾಣೆಯ ಪೊಲೀಸರು ಸಾಮಾಜಿಕ ಕಳಕಳಿ ಮೆರೆದಿದ್ದಾರೆ. SSLC ಮುಖ್ಯ ಪರೀಕ್ಷೆಯಲ್ಲಿ ಫೇಲ್ ಆಗಿ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಲು ನಿರ್ಧರಿಸಿದ್ದ 36 ವಿದ್ಯಾರ್ಥಿಗಳು, ಬಂಡೆಪಾಳ್ಯ ಪೊಲೀಸರು ಸಹಯೋಗದಲ್ಲಿ ಆಯೋಜಿಸಿದ್ದ 20 ದಿನಗಳ ತರಬೇತಿಯಲ್ಲಿ ಪಾಲ್ಗೊಂಡು ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.