ಜುಲೈ 3 ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದೆ. ರಾಜ್ಯ ಸರ್ಕಾರ ಹಾಗೂ ಪ್ರತಿಪಕ್ಷಗಳ ನಡುವೆ ಜಟಾಪಟಿಗೆ ವೇದಿಕೆ ಸಜ್ಜಾಗಿದೆ. 'ಗ್ಯಾರಂಟಿ' ಯೋಜನೆಗಳ ಅನುಷ್ಠಾನದ ಗೊಂದಲ ಮತ್ತು ಷರತ್ತುಗಳ ವಿರುದ್ಧ ಹೋರಾಟಕ್ಕೆ ವಿಪಕ್ಷಗಳು ಸಿದ್ಧವಾಗಿವೆ.