ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿದೆ. ಆದರೆ ಬಿಜೆಪಿ ಪಕ್ಷ ಇನ್ನೂ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಇಲ್ಲದೇ ಅಧಿವೇಶನ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ ಜೈರಾಮ್ ರಮೇಶ್ ಬಿಜೆಪಿ ಬಗ್ಗೆ ಟ್ವೀಟ್ ಮಾಡಿದ್ದಾರೆ. 'ಬಿಜೆಪಿ ಚುನಾವಣೆಯಲ್ಲಿ ಗೆದ್ದಾಗ ಅಬ್ಬರಿಸುತ್ತೆ; ಸೋತಾಗ ಗೋಳಾಡುತ್ತದೆ' ಎಂದು ಜೈರಾಮ್ ರಮೇಶ್ ವ್ಯಂಗ್ಯವಾಡಿದ್ದಾರೆ.