ಜುಲೈ 17, 18 ರಂದು ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಮುಂದಿನ ಸಭೆ ನಡೆಯಲಿದೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾದ ಕೆ.ಸಿ. ವೇಣುಗೋಪಾಲ್ ಅವರು ತಿಳಿಸಿದರು. ಕೆಲ ದಿನಗಳ ಹಿಂದೆ ಪಾಟ್ನಾದಲ್ಲಿ ವಿಪಕ್ಷಗಳ ಸಭೆ ನಡೆದಿತ್ತು. ಈ ಸಭೆಯಲ್ಲಿ ವಿಪಕ್ಷಗಳ ನಾಯಕರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಸೋಲಿಸುವುದರ ಬಗ್ಗೆ ಕಾರ್ಯತಂತ್ರ ಹೆಣೆದಿದ್ದರು.