ಹೊಂಬಾಳೆ ಪ್ರೊಡಕ್ಷನ್ ಸಂಸ್ಥೆ ನಿರ್ಮಿಸುತ್ತಿರುವ ಬಾಹುಬಲಿ ಖ್ಯಾತಿಯ ನಟ ಪ್ರಭಾಸ್ ನಟಿಸಿರುವ 'ಸಲಾರ್' ಚಿತ್ರದ ಟೀಸರ್ ಜುಲೈ 6ರ ಬೆಳಗಿನ ಜಾವ 5.12ಕ್ಕೆ ಬಿಡುಗಡೆಯಾಗಲಿದೆ. ಈ ಬಗ್ಗೆ ಹೊಂಬಾಳೆ ಚಿತ್ರ ನಿರ್ಮಾಣ ಸಂಸ್ಥೆ ಟ್ವಿಟರ್ ನಲ್ಲಿ ತಿಳಿಸಿದೆ. 'ಸಲಾರ್' ಚಿತ್ರವನ್ನು ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದಾರೆ.