ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ವಿಧಾನಸೌಧದ ಪಶ್ಚಿಮದ್ವಾರ ಬಳಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಹಸಿರು ಕ್ರಾಂತಿಯ ಹರಿಹಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ|| ಬಾಬು ಜಗಜೀವನ್‍ರಾಮ್ ರವರ 37 ನೇ ಪುಣ್ಯತಿಥಿಯ ಅಂಗವಾಗಿ ಬಾಬೂಜಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. 

 ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.