ಬೆಂಗಳೂರು : ಜುಲೈ 10ರಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳು ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆಗೆ ಉತ್ತರಿಸಲಿದ್ದಾರೆ ಎಂದು ಎಂದು ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ತಿಳಿಸಿದರು.

ಇಂದು ವಿಧಾನಸಭೆಯ ಕಲಾಪದಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿಗಳು ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆಗೆ ಜುಲೈ 6ರಂದು ಉತ್ತರವನ್ನು ನೀಡಬೇಕಾಗಿದ್ದು, ಹೆಚ್ಚಿನ ಶಾಸಕರು ವಿಧಾನಸಭೆಯಲ್ಲಿ ಚರ್ಚಿಸಬೇಕಾಗಿರುವುದರಿಂದ ಜುಲೈ 10ರಂದು ಸೋಮವಾರ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು.