ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಅರೆ ವೈದ್ಯಕೀಯ ಸಿಬ್ಬಂದಿ ಕೊರತೆ ನೀಗಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ವಿಧಾನಸಭೆಯ ಪ್ರಶೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಡಾ. ಅವಿನಾಶ್ ಉಮೇಶ್ ಜಾಧವ್ ಅವರ ಪ್ರಶ್ನೆಗೆ ಉತ್ತರಿಸಿದರು.

ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರು, ತಜ್ಞವೈದರ ಕೊರತೆ ಇರುವುದು ಗಮನಕ್ಕೆ ಬಂದಿದೆ. ಸಿಬ್ಬಂದಿ ಕೊರತೆ ನೀಗಿಸಲು ಪ್ರಾಮಾಣೀಕ ಪ್ರಯತ್ನ ಮಾಡಲಾಗುವುದು. ಈ ಸಂಬಂಧ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಹಲವು ಕಡೆಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡಗಳಿವೆ. ವೈದ್ಯರು ಹಾಗೂ ಇತರೆ ಸಿಬ್ಬಂದಿಗಳಿಲ್ಲ. ಅಂತಹ ಕಡೆಗಳಲ್ಲಿ ವೈದ್ಯರು, ಸಿಬ್ಬಂದಿಯನ್ನು ನೇಮಕ ಮಾಡಿ ಒಳ್ಳೆ ರೀತಿಯಲ್ಲಿ ನಿರ್ವಹಣೆ ಮಾಡುವುದು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಏಳು ಹಳೆಯ ತಾಲೂಕುಗಳಲ್ಲಿ ಇರುವ ಆಸ್ಪತ್ರೆಗಳನ್ನು ನೂರು ಹಾಸಿಗೆ ಸಾಮರ್ಥ್ಯಕ್ಕೆ ಹೆಚ್ಚಿಸಬೇಕಿದೆ. ಆನಂತರ ಹೊಸ ತಾಲ್ಲೂಕುಗಳಲ್ಲಿ ಆಸ್ಪತ್ರೆ ಮಂಜೂರು ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.