ಬೆಂಗಳೂರು : ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ, ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬಿಗ್ ಬಜಾರ್ ಹತ್ತಿರ, ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡ 514ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಸಚಿವ ದಿನೇಶ್ ಗುಂಡೂರಾವ್ ರವರು ಪಾಲ್ಗೊಂಡು, ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಪುಷ್ಪನಮನ ಸಲ್ಲಿಸುವ ಮೂಲಕ ಜಯಂತಿ ಮಹೋತ್ಸವ ಅಚರಣೆಗೆ ಚಾಲನೆ ನೀಡಿದರು.
ತದನಂತರ ನಾಡಪ್ರಭು ಕೆಂಪೇಗೌಡರು ಜಾತ್ಯತೀತ ಸಿದ್ದಾಂತದ ಹರಿಕಾರರು, ನಗರದಲ್ಲಿ ಉದ್ಯೋಗಕ್ಕೆ ತಕ್ಕಂತೆ ಪೇಟೆಗಳ ನಿರ್ಮಾಣ ಮಾಡಿದರು, 250ಕ್ಕೂ ಹೆಚ್ಚು ಕೆರೆಗಳ ನಿರ್ಮಾಣ ಮತ್ತು ಪರಿಸರ ಉಳಿಸುವಲ್ಲಿ ಅವರ ಕೊಡುಗೆಗಳನ್ನು ಸ್ಮರಿಸಿದರು.
ಕಂಸಾಳೆ, ಡೊಳ್ಳು ಕುಣಿತ, ವೀರಗಾಸೆ, ತಮಟೆ ವಾದ್ಯ, ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಮತ್ತು ಶಾಲೆ ಮಕ್ಕಳು, ಹಿರಿಯ ನಾಗರಿಕರು, ಮಹಿಳೆಯರು ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳು, ಮುಖಂಡರು, ಕಾರ್ಯಕರ್ತರು ಭವ್ಯ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.