ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಡನೆ ಮಾಡಿದ ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಉತ್ತೇಜನ ನೀಡಿದ್ದಾರೆ.
ಮೀನುಗಾರ ಮಹಿಳೆಯರಿಗೆ ಬ್ಯಾಂಕ್ ಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿ ₹50 ಸಾವಿರದಿಂದ ₹3 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ. ಮೀನುಗಾರ ದೋಣಿಗಳಿಗೆ ರಿಯಾಯಿತಿ ದರದ ಡೀಸೆಲ್ ಮಿತಿ 2 ಲಕ್ಷ ಕಿಲೋ ಲೀಟರ್ ವರೆಗೆ ಹೆಚ್ಚಿಸಲು ₹250 ಕೋಟಿ ನೆರವು ನೀಡಲಾಗಿದೆ.
ಮೀನುಗಾರಿಕೆ ದೋಣಿಗಳ ಸೀಮೆ ಎಣ್ಣೆ ಇಂಜಿನ್ ಗಳನ್ನು ಪೆಟ್ರೋಲ್ ಇಂಜಿನ್ ಆಗಿ ಪರಿವರ್ತನೆ ಮಾಡಲು ತಲಾ ₹50 ಸಾವಿರ ನೀಡಲಾಗುತ್ತದೆ. ಈ ಯೋಜನೆಗೆ ₹5 ಕೋಟಿ ನೆರವು ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು.