ಸಿದ್ದರಾಮಯ್ಯರವರು ಮಂಡಿಸಿದ 2023-24ನೇ ಸಾಲಿನ ಆಯವ್ಯಯ ಸರ್ವರನ್ನೂ ಒಳಗೊಂಡ, ಸರ್ವತೋಮುಖ ಪ್ರಗತಿಯ ಕರ್ನಾಟಕ ಅಭಿವೃದ್ಧಿ ಮಾದರಿಯ ಬಜೆಟ್ ಆಗಿ ಹೊರಹೊಮ್ಮಿದೆ ಎಂದು ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ನೀಡಿದ್ದ 5 ಗ್ಯಾರೆಂಟಿಗಳಿಗೆ ಅನುದಾನ ಒದಗಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಮತ್ತು ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ಮಾತು ಬಜೆಟ್ ನಲ್ಲಿ ಪ್ರತಿಬಿಂಬಿತವಾಗಿದೆ ಎಂದರು.