ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ರೈತರಿಗೆ ಸಾಲ ಸೌಲಭ್ಯ ಸಿಗಲಿದೆ. ಶೂನ್ಯ ಬಡ್ಡಿ ದರದಲ್ಲಿ ನೀಡುವ ಸಾಲದ ಮಿತಿ ₹5 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ.
ಶೇ. 3ರ ಬಡ್ಡಿ ದರದಲ್ಲಿ ನೀಡುತ್ತಿದ್ದ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲದ ಮಿತಿ 10 ಲಕ್ಷ ರೂಪಾಯಿಗಳಿಂದ 15 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.