ಬೆಂಗಳೂರು : ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ ಶಿವಕುಮಾರ್ ರವರು ಇಂದು ದಾಸರಹಳ್ಳಿಯ ಇಂದಿರಾ ಕ್ಯಾಂಟೀನ್ ಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.

ಇಂದಿರಾ ಕ್ಯಾಂಟೀನ್ ಪರಿಶೀಲನೆ: ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ ಶಿವಕುಮಾರ್ ರವರು ಇಂದು ಬೆಳಗ್ಗೆ ದಿಢೀರ್ ಬೆಂಗಳೂರು ಪ್ರದಕ್ಷಣೆ ಹಮ್ಮಿಕೊಂಡು ಪಾಲಿಕೆಯ ಯಾವುದೇ ಅಧಿಕಾರಿಗಳಿಗೆ, ಸಿಬ್ಬಂದಿಗೆ ಮುನ್ಸೂಚನೆ ನೀಡದೆ ಮೊದಲಿಗೆ ದಾಸರಹಳ್ಳಿ ವಲಯದ ವಾರ್ಡ್ ಸಂಖ್ಯೆ 39 ಚೊಕ್ಕಸಂದ್ರದ ಇಂದಿರಾ ಗಾಂಧಿ ಕ್ಯಾಂಟೀನ್ ಪರಿಸ್ಥಿತಿ ಪರಿಶೀಲಿಸಿದರು.

ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿ ತಿಂಡಿ‌ ಕೇಳಿದರು. ಅದಾಗಲೇ ತಿಂಡಿ ಖಾಲಿ ಆಗಿತ್ತು. ಈ ವೇಳೆ ಎಷ್ಟು ಪ್ಲೇಟ್ ಬರುತ್ತದೆ ಎಂದು ಕ್ಯಾಂಟೀನ್ ಮ್ಯಾನೇಜರ್ ಗೆ ಕೇಳಿದಾಗ 208 ಪ್ಲೇಟ್ ಬಂದು ಖಾಲಿ ಆಗಿದೆ ಎಂದಾದ ತಿಂಡಿ ಪೂರೈಕೆಯನ್ನು ಖಾತರಿಪಡಿಸಿಕೊಳ್ಳಲು ಸೂಚನೆ ನೀಡಿದರು.

ನಂತರ ದಾಸರಹಳ್ಳಿಯ 15ನೇ ವಾರ್ಡ್ ಕ್ಯಾಂಟೀನ್ ಗೆ ಭೇಟಿ ನೀಡಿ ತಾವು ಉಪ್ಪಿಟ್ಟು, ಕೇಸರಿಬಾತ್ ಸವಿದರು. ಈ ಸಂದರ್ಭದಲ್ಲಿ ಪಕ್ಕದಲ್ಲಿ ತಿಂಡಿ ತಿನ್ನುತ್ತಿದ್ದವರನ್ನು ಮಾತನಾಡಿಸಿ ಮಾಹಿತಿ ಪಡೆದರು. ಬಳಿಕ ಪ್ರತಿ ವಾರ, ತಿಂಗಳಿಗೆ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿ ಗುಣಮಟ್ಟ ಪರಿಶೀಲಿಸುವಂತೆ ಪಾಲಿಕೆ ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.