ಬೆಂಗಳೂರು : ದೊಡ್ಡಬಿದರಕಲ್ಲು ಘನತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ 150 ಮೆಟ್ರಿಕ್ ಟನ್ ಹಸಿ ತ್ಯಾಜ್ಯ ಸಂಸ್ಕರಿಸುವ ಸಾಮರ್ಥ್ಯವಿದ್ದು, ಪ್ರತಿನಿತ್ಯ 110 ಮೆಟ್ರಿಕ್ ಟನ್ ಸಂಸ್ಕರಣೆ ಮಾಡಲಾಗುತ್ತಿದ್ದು, ಅದನ್ನು ಪರಿಶೀಲನೆ ನಡೆಸಿದರು.
ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಬೆಂಗಳೂರಿನಲ್ಲಿ ಘನತ್ಯಾಜ್ಯ ಸಂಗ್ರಹ ಹೆಚ್ಚಳವಾಗುತ್ತಿದ್ದು, ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವ ಕುರಿತು ಗಂಭೀರ ಚಿಂತನೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಈ ವೇಳೆ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್, ಘನತ್ಯಾಜ್ಯ ವಿಭಾಗದ ವಿಶೇಷ ಆಯುಕ್ತರಾದ ಡಾ. ಹರಿಶ್ ಕುಮಾರ್, ವಲಯ ಜಂಟಿ ಆಯುಕ್ತರಾದ ಜಗದೀಶ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.