ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಮೊದಲ ಬಡ್ಜೆಟ್ ಇದಾಗಿದ್ದು,

2023-2024ನೇ ಸಾಲಿನ ಈ 14ನೇ ಬಜೆಟ್ ಸಿದ್ದರಾಮಯ್ಯ ಅವರಿಗೆ ವಿಶೇಷ,ಬಿಟ್ಟರೆ ಸಹಜವಾಗಿ ರಾಜ್ಯ ಜನರಿಗೆ ಯಾವುದೇ ಅನುಕೂಲ ವಿಲ್ಲದ ಜನ ವಿರೋಧಿ ಬಜೆಟ್ ಆಗಿದ್ದು, ಕೇಂದ್ರ ಸರ್ಕಾರದವರೆ ಮೇಲೆ ಗೂಬೆ ಕೂರಿಸುವುದು, ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಆರೋಪ ಮತ್ತು ಭ್ರಷ್ಟಾಚಾರದಲ್ಲಿ ತೊಡಗಿದೆ ಹಾಗೂ ಆರ್ಥಿಕ ನಿರ್ವಹಣೆ ಸರಿಯಾಗಿ ಮಾಡಿಲ್ಲ ಎಂದು ಹೇಳುತ್ತಿದ್ದಾರೆ, ಆರ್ಥಿಕ ನಿರ್ವಹಣೆ ಸರಿಯಾಗಿ ನಿರ್ವಹಣೆಯಾಗದಿದ್ದರೆ, ಸಧ್ಯ ಜಿಎಸ್‍ಟಿ ಸಂಗ್ರಹಣೆಯಲ್ಲಿ ಕರ್ನಾಟಕ ದೇಶದಲ್ಲಿ ಮುಂಚೂಣಿಯಲ್ಲಿ ಇದೆ ಈ ಹಿಂದಿನ ಬಿಜೆಪಿ ಸರ್ಕಾರ ಆರ್ಥಿಕ ಶಿಸ್ತು ಪಾಲಿಸದೆ ಇದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ ಎಂದು ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಎನ್ ಜಯರಾಮಣ್ಣ ಅವರು ಟೀಕಿಸಿದ್ದಾರೆ.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ವಿಶ್ವ ನಾಯಕ ಭಾರತದ ಹೆಮ್ಮೆಯ ಪ್ರಧಾನ ಮಂತ್ರಿ ಗಳಾದ ಮೋದಿಜೀ ನೇತೃತ್ವದ ಸರ್ಕಾರದ ಅವಧಿಯಲ್ಲಿ ರಚಿತವಾಯಿತು ಎಂಬ ಒಂದೇ ಕಾರಣದಿಂದ ಬೇರೆ ಬೇರೆ ನೆಪವೊಡ್ಡಿ ರಾಷ್ಟ್ರೀಯ ಶಿಕ್ಷಣ ನೀತಿಗೆ ಕೊಕ್ ನೀಡಲಾಗಿದೆ ಇದು ಖಂಡನೀಯ ಅದು ತರ್ಕಹೀನ ನಿಲುವು ರಾಷ್ಟ್ರೀಯ ಶಿಕ್ಷಣ ನೀತಿಯ ಒಳ್ಳೆಯ ಅಂಶಗಳನ್ನು ಒಪ್ಪಿಕೊಳ್ಳದಿರುವುದು ಖೇದಕರ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ತಮ್ಮ ಕೈಯಲ್ಲಿ ಆಗದೆ ಇದ್ದರೂ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಈಗ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂಡಿಸುವ ನೀಚ ರಾಜಕಾರಣ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆ ಜಾರಿಗಾಗಿ ಹಣ ಹೊಂದಿಸಲಾಗದೆ ಅಬಕಾರಿ ತೆರಿಗೆಯನ್ನು ಶೇ.20ರಷ್ಟು ಹೆಚ್ಚಿಸಿ ಎಲ್ಲ ತರಹದ ಮಧ್ಯದ ಬೆಲೆ ಏರಿಕೆ, ನೋಂದಣಿ ಮತ್ತು ಮುದ್ರಾಂಕ ಇಲಾಖೆ ತೆರಿಗೆಯ‌ನ್ನು ಆಸ್ತಿ ನೋಂದಣಿ ದರವನ್ನು ಹೆಚ್ಚಿಸಿದೆ‌. ಒಂದು ಕಡೆ ಉಚಿತ ಕೊಟ್ಟು ಇನ್ನೊಂದೆಡೆ ತೆರಿಗೆ ಹೆಚ್ಚಿಸಿ ಜನರಿಂದ ಹಣ ಕಿತ್ತುಕೊಳ್ಳುವ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ. ಇನ್ನು ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಕೇಂದ್ರದ ಎನ್ಇಪಿ, ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಕಾಂಗ್ರೆಸ್ ಸರ್ಕಾರ ರದ್ದುಗೊಳಿಸಲು ತೀರ್ಮಾನಿಸಿದೆ. ಗೋವುಗಳ ಸಂರಕ್ಷಣೆಗಾಗಿ ಘೋಷಿಸಲಾಗಿದ್ದ ‘ಜಿಲ್ಲೆಗೊಂದು ಗೋಶಾಲೆ’ಯಂತಹ ಈ ಹಿಂದಿನ ಬಿಜೆಪಿ ಸರ್ಕಾರದ ಉದ್ದೇಶಿತ ಜನಪರ ಯೋಜನೆಗಳನ್ನು ಕೈಬಿಟ್ಟಿರುವುದನ್ನು ಖಂಡಿಸಿದ ಅವರು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಯಾದ ಜನಪರ ಯೋಜನನೆಗಳನ್ನು ಕೈಬಿಡಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ತೀವ್ರ a ವಿರೋಧ ವ್ಯಕ್ತಪಡಿಸಿ ಬಿಜೆಪಿ ಸರ್ಕಾರದ ಯೋಜನೆಗಳನ್ನು ಮುಂದುವರೆಸಬೇಕು, ಹಾಗೂ ನೀವು ಜನರಿಗೆ ಕೊಟ್ಟ ಮಾತಿನಂತೆ 5 ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಯಾಗಬೇಕು ಎಂದು ಬೆಂಗಳೂರು ಉತ್ತರ ಜಿಲ್ಲೆ ಬಿಜೆಪಿ ಉಪಾಧ್ಯಕ್ಷ ಎನ್, ಜಯರಾಮಣ್ಣ ಹೇಳಿದ್ದಾರೆ.