ಶಿಡ್ಲಘಟ್ಟ: ನಗರದ ಸಿಆರ್ ಲೇಔಟ್ ನಲ್ಲಿ ನಾಲ್ಕನೇ ಹಂತದ ನಗರೋತ್ಥಾನ ಯೋಜನೆಯಡಿ ಸುಮಾರು 30 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಾಸಕ ಬಿ ಎಂ ರವಿಕುಮಾರ್ ಅವರು ಶಿಲಾನ್ಯಾಸ ನೆರೆವೇರಿಸಿದರು   

ಸಂದರ್ಭದಲ್ಲಿ ಮಾತನಾಡಿದ ಅವರು ನಗರಸಭಾ ವ್ಯಾಪ್ತಿಗೆ 30 ಕೋಟಿ ರೂ.ಅನುದಾನ ಬಿಡುಗಡೆಯಾಗಿದ್ದು, ಮೂಲಸೌಕರ್ಯ ಅಭಿವೃದ್ಧಿಗೆ ಅತೀ ಹೆಚ್ಚಿನ ಅನುದಾನ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಏರುತ್ತೇನೆ ಈಗಾಗಲೇ ಬಿಡುಗಡೆಯಾಗಿರುವ ಅನುದಾನವು ಟೆಂಡರ್ ಪ್ರಕ್ರಿಯೆ ಮುಗಿದಿತ್ತು ನಗರದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸದ್ವಿನಿಯೋಗವಾಗುತ್ತಿದೆ ಎಂದು ಹೇಳಿದ್ದಾರೆ.

ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಸ್ಥಳೀಯ ನಗರಸಭಾ ಸದಸ್ಯರ ಬೇಡಿಕೆ ಹಾಗೂ ಜನಸಂಪರ್ಕ ಸಭೆಯಲ್ಲಿ ಸ್ವೀಕರಿಸಿದ ಬೇಡಿಕೆಗಳಿಗೆ ಸ್ಪಂದಿಸಿ ಕಾಮಗಾರಿ ಗಳನ್ನು ಆರಂಭಿಸಿದ್ದು, ಎಲ್ಲೆಡೆ ಕಾಂಕ್ರೀಟ್ ರಸ್ತೆ, ಶಾಶ್ವತ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆಗೆ ಆದ್ಯತೆ ನೀಡಲಾಗಿದೆ. ನಗರದ ಸುವ್ಯವಸ್ಥಿತವಾಗಿರಲು ಮೂಲಭೂತಸೌಕರ್ಯಗಳಿರಬೇಕು ಎಂದರು.

ಶಿಡ್ಲಘಟ್ಟ ಕ್ಷೇತ್ರವು ರೇಷ್ಮೆ ಉತ್ಪಾದನೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಪಡೆದಿದ್ದು ಅಭಿವೃದ್ಧಿಗೆ ಮತ್ತು ಸ್ವಚ್ಛತೆಗೆ ಹೆಸರುವಾಸಿಯಾಗಬೇಕು ನನ್ನ ಅಧಿಕಾರ ಅವಧಿಯಲ್ಲಿ ಆಯ ಕಾಲಕ್ಕೆ ಬರುವಂತಹ ಅನುದಾನವನ್ನು ನಿರ್ದಿಷ್ಟ ಸಮಯದಲ್ಲಿ ವಿನಿಯೋಗ ಮಾಡಿ ಎಲ್ಲಾ ಕಾಮಗಾರಿಗಳನ್ನು ಸಮಯ ಮಿತಿಯೊಳಗೆ, ಉತ್ತಮ ಗುಣಮಟ್ಟದಿಂದ ಕೈಗೊಳ್ಳ್ಳಬೇಕೆಂದರು.

ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷರಾದ ಸುಮಿತ್ರ ರಮೇಶ್ ಸದಸ್ಯರಾದ ಬಸ್ ಮಂಜುನಾಥ್ ಅನಿಲ್ ಕುಮಾರ್ ಚೈತ್ರ ಮನೋಹರ್ ಜೆಡಿಎಸ್ ಮುಖಂಡರಾದ ರಮೇಶ್ ನಂದ ಕಿಶೋರ್ ಮಂಜುನಾಥ್ ಸೀನಪ್ಪ