ತಾಯಿ ಮರಣ ಪ್ರಮಾಣ ತಡೆಗಟ್ಟಲು ಪರಿಣಾಮಕಾರಿ ಕಾರ್ಯಕ್ರಮಗಳ ಅನುಷ್ಠಾನ: ದಿನೇಶ್ ಗುಂಡೂರಾವ್
ಬೆಂಗಳೂರು : ವಿಧಾನಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಅವರು ಕರ್ನಾಟಕದಲ್ಲಿ ಅತಿ ಹೆಚ್ಚು ತಾಯಂದಿರ ಮರಣ ಪ್ರಮಾಣ ದಾಖಲಾಗಿರುವ ಬಗ್ಗೆ ನಿಯಮ 330 ಅಡಿಯಲ್ಲಿ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್,
ತಾಯಿ ಮರಣವನ್ನು ಹೆಚ್ಚು ಪರಿಣಾಮಕಾರಿಯಾಗಿ ತಗ್ಗಿಸಲು ಸರ್ಕಾರ ಗರ್ಭಾವಸ್ಥೆಯಲ್ಲಿ ರಕ್ತಹೀನತೆ ಹೊಂದಿರುವ ತಾಯಂದರಿಗೆ iron sucrose ಚುಚ್ಚುಮದ್ದನ್ನು ನೀಡುತ್ತಿದೆ. ತೀವ್ರತರ ರಕ್ತಹೀನತೆಯಿಂದ ಬಳಲುತ್ತಿರುವ ಗರ್ಭಿಣಿ ಬಾಣಂತಿಯರಿಗೆ ಅಂದರೆ Hb% 10 ಗ್ರಾಂ ಗಿಂತ ಕೆಳಗಡೆ ಇರುವ ಇವರಿಗೆ ನೀಡಲಾಗುತ್ತಿದೆ. ಪ್ರಧಾನ ಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ (PMSMA), ವಿಸೃತ ಪ್ರಧಾನ ಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ (e-PMSMA), Midwifery ಉಪಕ್ರಮ, ಕೆಳಹಂತದ ಆಸ್ಪತ್ರೆಗಳಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ತಾಲೂಕು ಮಟ್ಟದ ಆಸ್ಪತ್ರೆಗಳನ್ನು ಇನ್ನೂ ಹೆಚ್ಚಿನ ಪರಿಣಾಮಕಾರಿಯಾಗಿ 24x7 ಹೆರಿಗೆಗಾಗಿ ಕಾರ್ಯಗತಗೊಳಿಸಲಾಗುತ್ತಿದೆ. ಕೆಳಹಂತದ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು & ಸಿಬ್ಬಂದಿಗಳಿಗೆ ಕೌಶಲ್ಯ ಆಧಾರಿತ ತರಬೇತಿ ನೀಡಲಾಗುತ್ತಿದೆ. ಕೆಳಹಂತದ ಆಸ್ಪತ್ರೆಗಳ ಕಾರ್ಯನಿರ್ವಾಹಣಾ ಅಂಶಗಳಾದ ಮಾಸಿಕ ಹೆರಿಗೆಗಳು, ಗುಣಮಟ್ಟ ಗರ್ಭಿಣಿ ಬಾಣಂತಿಯರ ಆರೈಕೆ ಮುಂತಾದವುಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಕೆಳಹಂತದ ಆಸ್ಪತ್ರೆಗಳ referral (ಶಿಫಾರಸ್ಸು) ಪ್ರತಿ ತಿಂಗಳು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಪ್ರತಿಯೊಂದು ತಾಯಿ ಮರಣದ ಆಡಿಟ್ ಅನ್ನು ಕಟ್ಟುನಿಟ್ಟಾಗಿ ಆಯಾ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆಸಲಾಗುತ್ತಿದ್ದು ಇನ್ನೂ ಹೆಚ್ಚಿನ ಪರಿಣಾಮಕಾರಿಯಾಗಿ ಮಾಡಲಾಗುವುದು.
ಪ್ರಸ್ತುತ ತಾಯಿ ಮರಣ ಪ್ರಮಾಣವು 2018-20ರ ಸಮೀಕ್ಷಾವರದಿಯಂತೆ 69 ಇದ್ದು 2025ರ ಒಳಗೆ ಇನ್ನಷ್ಟ ಕಡಿಮೆಗೊಳಿಸಲು ಇಲಾಖೆಗಳು ಕಾರ್ಯಕ್ರಮಗಳನ್ನು ಇನ್ನು ಹೆಚ್ಚಿನ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸೂಚನೆ ನೀಡಲಾಗುವುದೆಂದರು