ಬೆಂಗಳೂರು : ಚಿಕ್ಕ ಬಳ್ಳಾಪುರ ಜಿಲ್ಲೆಯಲ್ಲಿ ಹಿಂದಿನ ಸರ್ಕಾರದ ಅವಧಿಯಲ್ಲಿ ಆರೋಗ್ಯ ಸಚಿವರ ಭಾವಚಿತ್ರ ಮುದ್ರಿಸಿ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ನಿವೇಶನ ಹಂಚಿಕೆ ಪತ್ರ ನೀಡಿರುವುದು ಅನಧಿಕೃತ. ಈ ಕುರಿತು ತನಿಖೆಗೆ ಸೂಚಿಸಲಾಗಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ವಿಧಾನ ಸಭೆಯಲ್ಲಿ ಸೋಮವಾರ ಕಾಂಗ್ರೆಸ್ ನ ನಂಜೇಗೌಡ ಅವರ ಚುಕ್ಕೆ ಗುರುತಿಲ್ಲದ ಪ್ರೆಶ್ನೆ ಗೆ ಉತ್ತರಿಸಿದ ಅವರು, ವಸತಿ ಯೋಜನೆ ಹಂಚಿಕೆ ಪತ್ರದಲ್ಲಿ ಮುಖ್ಯಮಂತ್ರಿ ಹಾಗೂ ವಸತಿ ಸಚಿವರ ಭಾವಚಿತ್ರ ಮಾತ್ರ ಹಾಕಬೇಕು ಎಂಬ ನಿಯಮ ಇದ್ದರೂ ಅನಧಿಕೃತವಾಗಿ ಮುದ್ರಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಿದ್ದು ಈ ಬಗ್ಗೆ ತನಿಖಾ ತಂಡಪರಿಶೀಲನೆ ನಡೆಸಿ ವರದಿ ನೀಡಿದ ತಕ್ಷಣ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ .
2021 -22 ರಿಂದ ರಿಂದ 2023 -24 ರವರೆಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಒಟ್ಟು 26,582 ನಿವೇಶನ ಹಕ್ಕು ಪತ್ರ ನೀಡಲಾಗಿದೆ ಎಂದು ಹೇಳಿದ್ದಾರೆ.