ಬೆಂಗಳೂರು : ನಗರದ ವಿ.ವಿ ಪುರಂನಲ್ಲಿರುವ ತಿಂಡಿ ಬೀದಿಯನ್ನು ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ವಿನೂತನ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, 2023ರ ಆಗಸ್ಟ್ ತಿಂಗಳಲ್ಲಿ ಬಾಕಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದೆಂದು ದಕ್ಷಿಣ ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರು ತಿಳಿಸಿದರು.
ವಿವಿ ಪುರಂ ತಿಂಡಿ ಬೀದಿಯನ್ನು ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿ ಪುರಂನ ತಿಂಡಿ ಬೀದಿಯಲ್ಲಿ ಸಮರ್ಪಕ ಮೂಲಭೂತ ಸೌಕರ್ಯಗಳನ್ನು ಒಗದಿಸುವ ನಿಟ್ಟಿನಲ್ಲಿ ಹಾಗೂ ಜನರನ್ನು ಆಕರ್ಷಿಸುವ ನಿಟ್ಟಿನಲ್ಲಿ ಸಜ್ಜನ್ ರಾವ್ ವೃತ್ತ ಮತ್ತು ಮಿನರ್ವ ವೃತ್ತದ ನಡುವೆ ಇರುವ ಸುಮಾರು 200 ಮೀಟರ್ ಉದ್ದದ ರಸ್ತೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರ ಬಾಕಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದೆಂದು ಹೇಳಿದರು.