ಬೆಂಗಳೂರು: ಜುಲೈ 15, 2023
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 'ಅಖಿಲ ಕರ್ನಾಟಕ ಕ್ರೈಸ್ತ ಮಾನವ ಹಕ್ಕುಗಳ ಒಕ್ಕೂಟ ವೇದಿಕೆ'ಯ ಸದಸ್ಯರು ಮಣಿಪುರದಲ್ಲಿ ಮೀಸಲಾತಿಗಾಗಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.
ಮಣಿಪುರ ರಾಜ್ಯದಲ್ಲಿ ಮೀಸಲಾತಿಗಾಗಿ ಮೈತೇಯಿ ಹಾಗೂ ಕುಕಿ ಸಮುದಾಯದ ನಡುವೆ ಕಳೆದ 2 ತಿಂಗಳಿಂದ ಹಿಂಸಾಚಾರ ನಡೆಯುತ್ತಿದೆ. ಈ ಹಿಂಸಾಚಾರದಲ್ಲಿ ಮಣಿಪುರದ ಕ್ರೈಸ್ತ ಸಮುದಾಯದ ಜನರೂ ಸಹ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಹಾಗಾಗಿ ಕ್ರೈಸ್ತ ಸಮುದಾಯದ ಜನರಿಗೆ ಮಣಿಪುರದ ರಾಜ್ಯ ಸರ್ಕಾರ & ಕೇಂದ್ರ ಸರ್ಕಾರ ಸೂಕ್ತ ರೀತಿಯಲ್ಲಿ ಭದ್ರತೆ ನೀಡಬೇಕೆಂದು ಒತ್ತಾಯಿಸಿದರು.