ಬೆಂಗಳೂರು: ಜುಲೈ 15, 2023

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು 'ಅಖಿಲ ಕರ್ನಾಟಕ ಕ್ರೈಸ್ತ ಮಾನವ ಹಕ್ಕುಗಳ ಒಕ್ಕೂಟ ವೇದಿಕೆ'ಯ ಸಾವಿರಾರು ಸದಸ್ಯರು ಮಣಿಪುರದಲ್ಲಿ ಮೀಸಲಾತಿಗಾಗಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. 

ಮಣಿಪುರದಲ್ಲಿ ಕ್ರೈಸ್ತ ಸಮುದಾಯದವರಿಗೆ ಕೇಂದ್ರ & ರಾಜ್ಯ ಸರ್ಕಾರ ಸೂಕ್ತ ರೀತಿಯಲ್ಲಿ ಭದ್ರತೆ ನೀಡಬೇಕೆಂದು ಒತ್ತಾಯಿಸಿದರು.