ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆ ಇಂದಿನಿಂದ ಜಾರಿಗೆ ಬರಲಿದೆ. ಇಂದು ಸಂಜೆ ವಿಧಾನಸೌಧದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಯೋಜನೆಯನ್ನು ಉದ್ಘಾಟಿಸಲಿದ್ದಾರೆ ಎಂದು ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಧ್ಯಮಗಳಿಗೆ ತಿಳಿಸಿದರು. ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ₹2 ಸಾವಿರ ಸಿಗಲಿದೆ.