ದೆಹಲಿಯಲ್ಲಿ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರನ್ನು ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ. ವಿಜಯೇಂದ್ರ ಅವರು ಭೇಟಿಯಾದರು. ಉಭಯ ನಾಯಕರು ಕರ್ನಾಟಕ ರಾಜ್ಯದ ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಹಾಗೂ ಮುಂಬರುವ ಲೋಕಸಭಾ ಚುನಾವಣೆ ಬಗ್ಗೆ ಚರ್ಚಿಸಿದರು.