ದೇಶದಲ್ಲಿ ಕರ್ನಾಟಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅತಿ ಶ್ರೀಮಂತ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಹಾಗೂ ನ್ಯಾಷನಲ್ ಎಲೆಕ್ಷನ್ ವಾಚ್ (NEW) ಸಂಸ್ಥೆಗಳು ಬಿಡುಗಡೆ ಮಾಡಿರುವ ವರದಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಬಗ್ಗೆ ಉಲ್ಲೇಖವಾಗಿದೆ. ₹1413 ಕೋಟಿ ಆಸ್ತಿ ಹೊಂದಿರುವ ಡಿ.ಕೆ. ಶಿವಕುಮಾರ್ ಶ್ರೀಮಂತ ಶಾಸಕರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.