ಕರ್ನಾಟಕ ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಲೀಟರ್ ಗೆ 3 ರೂ. ಹೆಚ್ಚಳ ಮಾಡಲಾಗಿದೆ. ನೂತನ ದರ ಆಗಸ್ಟ್ 1ರಿಂದ ಜಾರಿಗೆ ಬರಲಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ KMF ಅಧಿಕಾರಿಗಳ ಸಭೆಯಲ್ಲಿ 3 ರೂ. ಹೆಚ್ಚಳದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

KMF ಅಧಿಕಾರಿಗಳು ಹಾಲಿನ ದರವನ್ನು ಲೀಟರ್ ಗೆ 5 ರೂ. ಹೆಚ್ಚಿಸಬೇಕೆಂದು ರಾಜ್ಯ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದರು.