ರಾಜ್ಯ ಸರ್ಕಾರವನ್ನು ಬೀಳಿಸಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದವರು ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ವಾಗ್ದಾಳಿ ನಡೆಸಿದರು.
ವಿರೋಧ ಪಕ್ಷಗಳು ಏನೇ ಷಡ್ಯಂತ್ರ ಮಾಡಿದರೂ ನಮಗೆ ಯಾವುದೇ ಆತಂಕವಿಲ್ಲ. ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ಒಗ್ಗಟ್ಟಾಗಿದ್ದೇವೆ. ಮುಂದಿನ 5 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷ ಆಡಳಿತ ನಡೆಸುತ್ತದೆ ಎಂದು ದಿನೇಶ್ ಗುಂಡೂರಾವ್ ಅವರು ವಿಶ್ವಾಸ ವ್ಯಕ್ತಪಡಿಸಿದರು.