ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಹೆದ್ದಾರಿ ಪರಿಶೀಲನೆ ನಡೆಸಿದರು. ಈ ವೇಳೆ ಕೃಷಿ ಸಚಿವ ಚಲುವರಾಯಸ್ವಾಮಿ, ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ (IPS) ಸೇರಿದಂತೆ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಹೆದ್ದಾರಿಯಲ್ಲಿ ಹೆಚ್ಚು ಅಪಘಾತ ಆಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪರಿಶೀಲನೆ ಮಾಡಿದರು.