ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಣಿಪುರ ಹಿಂಸಾಚಾರ ಖಂಡಿಸಿ 'ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ' (ಬಿ) ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎನ್. ಮೂರ್ತಿ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಮಣಿಪುರ ರಾಜ್ಯದಲ್ಲಿ ಕಳೆದ 2 ತಿಂಗಳಿನಿಂದ ಹಿಂಸಾಚಾರ ಭುಗಿಲೆದ್ದಿದೆ. ಇದುವರೆಗೆ 150 ಕ್ಕೂ ಹೆಚ್ಚು ಅಮಾಯಕ ಜನರನ್ನು ಹತ್ಯೆ ಮಾಡಲಾಗಿದೆ. ಅನೇಕ ಮಹಿಳೆಯರ ಮೇಲೆ ಅತ್ಯಾಚಾರ ನಡೆದಿದೆ, ದೌರ್ಜನ್ಯವಾಗಿದೆ. ಹಾಗಾಗಿ ಕೇಂದ್ರ ಸರ್ಕಾರವು ಈ ಕೂಡಲೇ ಮಣಿಪುರ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಆಡಳಿತ ಜಾರಿಗೊಳಿಸಬೇಕೆಂದು ಎನ್. ಮೂರ್ತಿ ಅವರು ಒತ್ತಾಯಿಸಿದರು.