ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಡೆದ "ಬ್ರಹ್ಮಶ್ರೀ ನಾರಾಯಣಗುರು ಜಯಂತಿ"ಯನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ವಿಖ್ಯಾತಾನಂದ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಈ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಚಿವರಾದ ಮಧು ಬಂಗಾರಪ್ಪ ಹಾಗೂ ಶಿವರಾಜ್ ತಂಗಡಗಿ ಅವರು ಉಪಸ್ಥಿತರಿದ್ದರು