ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು "ಜೈ ಭೀಮ್ ಭಾರತ" ಸಂಘಟನೆಯ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

ಈ ಪತ್ರಿಕಾಗೋಷ್ಠಿಯಲ್ಲಿ 'ಜೈ ಭೀಮ್ ಭಾರತ' ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಎಸ್. ನಾರಾಯಣಸ್ವಾಮಿ ಅವರು ಮಾತನಾಡಿದರು. 

  ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದ ಭಾವನಹಳ್ಳಿ ಹಾಗೂ ಮಿಂಡಹಳ್ಳಿ ಗ್ರಾಮದ 600 ಕ್ಕೂ ಹೆಚ್ಚು ರೈತರ ಜಮೀನನ್ನು 6 ವರ್ಷಗಳ ಹಿಂದೆ ಕೆಐಎಡಿಬಿ ಅಧಿಕಾರಿಗಳು ಸ್ವಾಧೀನಪಡಿಸಿಕೊಂಡಿದ್ದಾರೆ. ಆದರೆ ಕೆಐಎಡಿಬಿ ಅಧಿಕಾರಿಗಳು ಇದುವರೆಗೆ ರೈತರ ಜಮೀನಿಗೆ ಪರಿಹಾರ ನೀಡದೆ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಎಸ್. ನಾರಾಯಣಸ್ವಾಮಿ ಅವರು ಆರೋಪಿಸಿದರು. ಕೆಐಎಡಿಬಿ ಅಧಿಕಾರಿಗಳು ತಕ್ಷಣವೇ ಸಂತ್ರಸ್ತ ರೈತರಿಗೆ ಪರಿಹಾರ ನೀಡಬೇಕೆಂದು ಎಸ್. ನಾರಾಯಣಸ್ವಾಮಿ ಅವರು ಒತ್ತಾಯಿಸಿದರು. ಒಂದು ವೇಳೆ ಶೀಘ್ರವಾಗಿ ರೈತರಿಗೆ ಪರಿಹಾರ ನೀಡದಿದ್ದರೆ ಬೆಂಗಳೂರಿನ ಕೆಐಎಡಿಬಿ ಕೇಂದ್ರ ಕಚೇರಿ ಮುಂದೆ ವಿವಿಧ ಸಂಘಟನೆಗಳ ಜತೆಗೆ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಎಸ್. ನಾರಾಯಣಸ್ವಾಮಿ ಅವರು ಎಚ್ಚರಿಕೆ ನೀಡಿದರು.