ಮೈಸೂರು ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪನವರ ನೇತೃತ್ವದ ಜಿಲ್ಲಾಡಳಿತದ ನಿಯೋಗದವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಮೈಸೂರು ದಸರಾ ಆಹ್ವಾನಪತ್ರಿಕೆ ನೀಡಿ ಸ್ವಾಗತಿಸಿದರು. ಮೈಸೂರು ಮೇಯರ್ ಶಿವಕುಮಾರ್,  ಜಿಲ್ಲಾಧಿಕಾರಿ ರಾಜೇಂದ್ರ, ಪೊಲೀಸ್ ಆಯುಕ್ತ ರಮೇಶ್ ಬಾನೂತ್, ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಗಾಯತ್ರಿ , ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಅವರುಗಳು ನಿಯೋಗದ ಪರವಾಗಿ ಹಾಜರಿದ್ದರು.